ಬೆಂಗಳೂರು: ರಾಜ್ಯ ನಾಯಕತ್ವದ ವಿರುದ್ಧ ಪದೇ ಪದೇ ಹೇಳಿಕೆ ನೀಡುತ್ತಿದ್ದ ಬಿಜೆಪಿ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಆರು ವರ್ಷಗಳ ಕಾಳ ಉಚ್ಛಾಟಿಸಿ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.
ಬಿಜೆಪಿ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ತಕ್ಷಣವೇ ಈ ನಿರ್ಧಾರ ಜಾರಿಗೆ ಬಂದಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಪದೇ ಪದೇ ಹೇಳಿಕೆ ನೀಡಿ, ಬಿಜೆಪಿ ಶಿಸ್ತು ಸಮಿತಿ ನೋಟಿಸ್‌ಗೂ ಕ್ಯಾರೇ ಎನ್ನದ ಶಾಸಕ ಯತ್ನಾಳ್‌ರನ್ನು ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಮೂಲಕ ಬಿಜೆಪಿ ರೆಬೆಲ್ ನಾಯಕನಿಗೆ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಯತ್ನಾಳ್ ಮುಂದಿನ ನಡೆಯೇನು ಎಂಬುದೇ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.





