ಮೈಸೂರು: ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜನರು ದೇವಾಲಯಗಳತ್ತ ಮುಖ ಮಾಡಿದ್ದಾರೆ.
ಯುಗಾದಿ ಹಬ್ಬದಂದು ಮುಂಜಾನೆಯೇ ಸ್ನಾನ ಮಾಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬೇವು ಬೆಲ್ಲ ತಿಂದು ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಿದ್ದಾರೆ.
ಹಬ್ಬದ ಅಂಗವಾಗಿ ಇಂದು ಜನರು ದೇವಾಲಯಗಳತ್ತ ಮುಖ ಮಾಡಿದ್ದು, ದೇವಸ್ಥಾನಗಳಲ್ಲಿ ಕಾಲಿಡಲು ಜಾಗವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.
ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನ ಹಾಗೂ ಕಾಮ ಕಾಮೇಶ್ವರಿ ದೇವಸ್ಥಾನ ಸೇರಿದಂತೆ ಹಲವು ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಜನತೆ ಆಗಮಿಸುತ್ತಿದ್ದಾರೆ.
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತೆರಳುತ್ತಿದ್ದಾರೆ.





