Mysore
23
scattered clouds

Social Media

ಸೋಮವಾರ, 25 ಮೇ 2026
Light
Dark

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್.‌2ರಿಂದ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ಏಪ್ರಿಲ್.‌2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಭಾರೀ ಮಳೆಯಾಗುತ್ತಿದೆ.

ಆದರೆ ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರ್ಗಿ, ಬೀದರ್‌ನಲ್ಲಿ ಸಾಧಾರಣ ಮಳೆಯಾಗಲಿದೆ.

ಏಪ್ರಿಲ್.‌2ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೈತರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

 

Tags:
error: Content is protected !!