Mysore
33
overcast clouds

Social Media

ಬುಧವಾರ, 08 ಏಪ್ರಿಲ 2026
Light
Dark

ಬೆಲೆ ಏರಿಕೆ ವಿರುದ್ಧ ಏಪ್ರಿಲ್.‌2ರಿಂದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಿದ್ಯುತ್‌, ಹಾಲು ಹಾಗೂ ಬಸ್‌ ಪ್ರಯಾಣ ದರ ಎರಿಕೆ ವಿರುದ್ಧ ಏಪ್ರಿಲ್.‌2ರಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್‌ ಸದಸ್ಯರು, ಮಾಜಿ ಶಾಸಕರು, ವಿಧಾನಸಭೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು, ಜಿಲ್ಲಾ ಘಟಕದ ಅಧ್ಯಕ್ಷರು, ಪಕ್ಷದ ಎಲ್ಲಾ ಪದಾಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಶಾಸಕರ ಅಮಾನತು ಖಂಡಿಸಿ ಕೂಡ ಪ್ರತಿಭಟನೆ ನಡೆಸಲಾಗುವುದು ಎಂದು ವಿಜಯೇಂದ್ರ ಮಾಹಿತಿ ನೀಡಿದರು.

Tags:
error: Content is protected !!