Mysore
13
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯಾಗಿ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ನೇಮಕ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಯುವ ಐಎಫ್‌ಎಸ್‌ ಅಧಿಕಾರಿ ನಿಧಿ ತಿವಾರಿ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯೂ, 2014ರ ಬ್ಯಾಚ್‌ನ ಭಾರತೀಯ ವಿದೇಶಾಂಗ ಸೇವೆ ಅಧಿಕಾರಿಯಾಗಿರುವ ನಿಧಿ ತಿವಾರಿ ಅವರನ್ನು ಪ್ರಧಾನಿ ಮೋದಿಯವರ ಖಾಸಗಿ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದ್ದು, ಈ ಆದೇಶ ಕೂಡಲೇ ಜಾರಿಗೆ ಬರುವಂತೆ ನೇಮಕಾತಿ ಆದೇಶವನ್ನು ಅನುಮೋದಿಸಿದೆ.

ನಿಧಿ ತಿವಾರಿ ಹಿನ್ನೆಲೆ ಏನು?

ನಿಧಿ ತಿವಾರಿ ಮೂಲತಃ ವಾರಣಾಸಿಯ ಮೆಹಮುರ್ಗಂಜ್‌ ಮೂಲದವರಾಗಿದ್ದಾರೆ. ಇವರು ತಿವಾರಿ 2013ರ ನಾಗರೀಕ ಸೇವಾ ಪರೀಕ್ಷೆಯಲ್ಲಿ 96ನೇ ರ‍್ಯಾಂಕ್‌ಗಳಿಸಿದ್ದರು. 2016ರಲ್ಲಿ ಅತ್ಯುತ್ತಮ ತರಬೇತಿ ಅಧಿಕಾರಿ ಮತ್ತು ಪ್ರಬಂಧಕ್ಕೆ ರಾಯಭಾರಿ ಇಮಲ್‌ ಸನ್ಯಾಲ್‌ ಸ್ಮಾರಕ ಪದಕವನ್ನು ನೀಡಲಾಗಿತ್ತು. ಅಲ್ಲದೇ ತಿವಾರಿ ಅವರನ್ನು 2023ರ ಜನವರಿ 6 ರಿಂದ ಪ್ರಧಾನ ಮಂತ್ರಿ ಕಚೇರಿಯಲ್ಲಿ ಉಪ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು. ಈ ನೇಮಕದ ಮೇರೆಗೆ ಅವರು ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಬಳಿಕ ನಿಧಿ ತಿವಾರಿ ಅವರನ್ನು ಪ್ರಧಾನ ಮಂತ್ರಿ ಕಚೇರಿಯಲ್ಲಿ ಅಧೀನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು.

Tags:
error: Content is protected !!