Mysore
31
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಸುನೀತಾ ವಿಲಿಯಮ್ಸ್‌ ಮೊದಲ ಪ್ರತಿಕ್ರಿಯೆ

ವಾಷಿಂಗ್ಟನ್:‌ 9 ತಿಂಗಳ ಬಳಿಕ ಬಾಹ್ಯಾಕಾಶದಿಂದ ಭೂಮಿಗೆ ಮರಳಿರುವ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.

ಬಾಹ್ಯಾಕಾಶದಲ್ಲಿನ ಹಲವು ಕೌತುಕಗಳು, ಸಂಶೋಧನೆ ಹಾಗೂ ಭೂಮಿ ಕುರಿತು ಅನುಭವ ಹಂಚಿಕೊಂಡಿರುವ ಅವರು, ಭಾರತದ ಬಗ್ಗೆ ತೀವ್ರ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸುನೀತಾ ವಿಲಿಯಮ್ಸ್‌ ಅವರು, ನಾನು ಶೀಘ್ರದಲ್ಲೇ ನನ್ನ ತಂದೆಯ ತಾಯ್ನಾಡಿಗೆ ಭೇಟಿ ನೀಡುತ್ತೇನೆ. ಮುಂದಿನ ಕಾರ್ಯಾಚರಣೆಯಲ್ಲಿ ಭಾಗಿಯಾಗುವ ಭಾರತೀಯ ಪ್ರಜೆಗಳನ್ನು ಭೇಟಿ ಮಾಡುತ್ತೇನೆ. ಭಾರತ ಶ್ರೇಷ್ಠ ಪ್ರಜಾಪ್ರಭುತ್ವ ದೇಶ ಎಂದು ಬಣ್ಣಿಸಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಭಾರತ ಬಾಹ್ಯಾಕಾಶ ಜಗತ್ತಿನಲ್ಲಿ ತನ್ನ ನೆಲೆಯನ್ನು ಸ್ಥಾಪಿಸಿದೆ. ನಾನು ಅವರಿಗೆ ಸಹಾಯ ಮಾಡಲು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಬಾಹ್ಯಾಕಾಶದಿಂದ ಭಾರತ ಅದ್ಭುತವಾಗಿ ಕಾಣುತ್ತದೆ. ಹಿಮಾಲಯದ ಮೇಲೆ ಹೋದಾಗಲೆಲ್ಲಾ ಅದ್ಭುತ ಚಿತ್ರಗಳು ಸಿಕ್ಕಿವೆ. ಗುಜರಾತ್‌ ಹಾಗೂ ಮುಂಬೈ ದೀಪಗಳ ಜಾಲದಂತೆ ಕಾಣುತ್ತದೆ ಎಂದು ತಿಳಿಸಿದರು.

 

Tags:
error: Content is protected !!