ಪ್ರಶಾಂತ್ ಎನ್.ಮಲ್ಲಿಕ್
ಚಾಮರಾಜನಗರ: ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನದ ರಸ್ತೆ ಬಳಿ ರಾತ್ರಿ ಸಂಚಾರ ನಿಷೇಧ ತೆರವಿಗೆ ಹೆಚ್ಚುತ್ತಿರುವ ಒತ್ತಡ ಹಿನ್ನಲೆ ಪರಿಸರವಾದಿಗಳಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರತಿಷ್ಠಿತ ಹುಲಿ ಸಂರಕ್ಷಿತ ಪ್ರದೇಶವಾದ ಬಂಡೀಪುರ. ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ಕರ್ನಾಟಕ ಮತ್ತು ಕೇರಳ ಸರ್ಕಾರಗಳಿಂದ ನಡೆಯುತ್ತಿದೆ. ಇದರ ಬೆನ್ನಲ್ಲೇ ನಿಷೇಧ ತೆರವಿಗೆ ಪರಿಸರವಾದಿಗಳ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಈ ಕುರಿತು ಪರಿಸರವಾದಿಗಳು ಪ್ರತಿಭಟನೆ ನಡೆಸಿದ್ದು, ರಾಜಕಾರಣಿಗಳ ಹೇಳಿಕೆಗಳು ಸಾಕಷ್ಟು ಸಂದೇಹವನ್ನು ಉಂಟುಮಾಡುತ್ತಿವೆ. ರಾತ್ರಿ ಸಂಚಾರಕ್ಕೆ ಅವಕಾಶ ನೀಡಿದರೆ, ಹಲವಾರು ಪ್ರಾಣಿಗಳು ಸಾವನ್ನಪ್ಪಲಿವೆ. ಹಾಗಾಗಿ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಇದಕ್ಕೆ ಅವಕಾಶ ನೀಡದೇ, ನ್ಯಾಯಾಲಯದ ತೀರ್ಪನ್ನು ಗೌರವಿಸಿ, ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. ರಾತ್ರಿ ಸಂಚಾರದಿಂದ ವನ್ಯಜೀವಿಗಳಿಗೆ ಅಪಾಯ ಸಂಭವಿಸಲಿದೆ. ಹೀಗಾಗಿ ರಾತ್ರಿ 9 ರಿಂದ ಬೆಳಗ್ಗೆ 6 ರವರಗೆ ವಾಹನಗಳ ಸಂಚಾರ ನಿರ್ಬಂಧ ಹೀಗೆ ಮುಂದುವರಿಯಬೇಕು ಎಂದು ಆಗ್ರಹಿಸಿದರು.





