Mysore
26
overcast clouds

Social Media

ಬುಧವಾರ, 13 ಮೇ 2026
Light
Dark

ದರ್ಶನ್‌ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಏ.22ಕ್ಕೆ ಮುಂದೂಡಿಕೆ

ನವದೆಹಲಿ: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ರಾಜ್ಯ ಪೊಲೀಸ್‌ ಇಲಾಖೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಏಪ್ರಿಲ್‌ 22ಕ್ಕೆ ಮುಂದೂಡಿದೆ.

ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಕೆಳ ಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಕ್ಕಿದ್ದು, ಸರ್ಕಾರದ ಅನುಮತಿಯ ಮೇರೆಗೆ ರಾಜ್ಯ ಪೊಲೀಸ್‌ ಇಲಾಖೆಯು ಆರೋಪಿಗಳಿಗೆ ನೀಡಿರುವ ಜಾಮೀನು ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಏಪ್ರಿಲ್‌ 22ಕ್ಕೆ ಮುಂದೂಡಿದೆ. ರಾಜ್ಯ ಹೈಕೋರ್ಟ್‌ ಡಿಸೆಂಬರ್‌ ತಿಂಗಳಲ್ಲಿ ನಟ ದರ್ಶನ್‌, ಪವಿತ್ರಾ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.

Tags:
error: Content is protected !!