Mysore
20
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ವಿನಯ್‌ ಸೋಮಯ್ಯ ಆತ್ಮಹತ್ಯೆ ಪ್ರಕರಣ : ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು : ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣವನ್ನು ತಡಮಾಡದೇ ಸಿಬಿಐಗೆ ವಹಿಸಿ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನಗರದ ಬಿ.ಆರ್‌ ಅಂಬೇಡ್ಕರ್‌ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕೊಡಗು ಎಸ್.ಪಿ ನೇರ ಹೊಣೆ ಎಂಬುದು ಗೊತ್ತಾಗಿದೆ. ಕೂಡಲೇ ಎಸ್‌.ಪಿ ಅವರನ್ನು ಅಮಾನತು ಮಾಡಬೇಕು. ಪ್ರಕರಣ ಆರೋಪಿಗಳಾದ ಶಾಸಕ ಪೊನ್ನಣ್ಣ, ಮಂಥರ್‌ ಗೌಡ, ಆರೋಪಿತ ತನ್ನೀರ ಮೈನಾ ಅವರನ್ನು ಎಫ್‌ಐಆರ್‌ನಲ್ಲಿ ಸೇರಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಪ್ರಕರಣದಲ್ಲಿ ಪೊಲೀಸರು ನೇರವಾಗಿ ಭಾಗವಹಿಸಿದ್ದಾರೆ. ಜಾಮೀನು ಪಡೆದರೂ ಯಾಕೆ ಅವರನ್ನು ಹುಡುಕುತ್ತಿದ್ದರು? ಅವರೇನು ರೌಡಿಯೇ ಎಂದು ಪ್ರಶ್ನಿಸಿದ್ದಾರೆ.

Tags:
error: Content is protected !!