Mysore
14
scattered clouds

Social Media

ಶನಿವಾರ, 20 ಡಿಸೆಂಬರ್ 2025
Light
Dark

IAS, KAS ಪರೀಕ್ಷೆಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಮೈಸೂರು :  ಐಎಎಸ್‌, ಕೆಎಎಸ್‌ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಆಸಕ್ತರು ಈ ಕೂಡಲೇ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ.

ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಕೇಂದ್ರ ಲೋಕಸೇವಾ ಆಯೋಗದ ಐಎಎಸ್‌ ಹಾಗೂ ರಾಜ್ಯ ಲೋಕಸೇವಾ ಆಯೋಗದ ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿವಿಯ ಕೇಂದ್ರ ಕಚೇರಿಯಲ್ಲಿ ತರಬೇತಿ ನೀಡಲಿದೆ.

ಆಸಕ್ತರು ಏ.9 ರೊಳಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4:30 ರವರೆಗೆ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2515944 ಅಥವಾ 9964760090 ನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಪ್ರೊ.ಕೆ.ಬಿ ಪ್ರವೀಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!