Mysore
31
few clouds

Social Media

ಶನಿವಾರ, 14 ಫೆಬ್ರವರಿ 2026
Light
Dark

ವಿನಯ್‌ ಆತ್ಮಹತ್ಯೆ ಪ್ರಕರಣ| ತನಿಖೆ ನಡೆಯುತ್ತಿರುವಾಗ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್‌ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ತನಿಖೆ ನಡೆಯುತ್ತಿರುವ ವೇಳೆ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ವಿನಯ್‌ ಅತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆಯೂ ಆರಂಭಿಸಿದ್ದಾರೆ. ಈ ಮಧ್ಯೆ ಕಾಂಗ್ರೆಸ್‌ ಶಾಸಕರಾದ ಎ.ಎಸ್‌.ಪೊನ್ನಣ್ಣ ಮತ್ತು ಮಂಥರ್‌ ಗೌಡ ಅವರ ಹೆಸರನ್ನು ವಿನಯ್‌ ಆತ್ಮಹತ್ಯೆ ಪ್ರಕರಣದ ಎಫ್‌ಐಆರ್‌ನಲ್ಲಿ ಸೇರಿಸಬೇಕೆಂಬ ಬಿಜೆಪಿ ನಾಯಕರ ಬೇಡಿಕೆ ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.

ಇನ್ನೂ ಬಿಜೆಪಿ ನಾಯಕರಿಗೆ ಸಾವಿನಲ್ಲೂ ರಾಜಕೀಯ ಮಾಡುವುದು ಕರಗತವಾಗಿದೆ ಬಂದಿದ್ದು, ಹತಾಶರಾಗಿ ಮಾತನಾಡುತ್ತಿದ್ದಾರೆ. ಆದರೆ ತನಿಖೆ ನಡೆಯುವಾಗ ಪ್ರಕರಣದ ಬಗ್ಗೆ ಮಾತನಾಡುವುದು ಸರಿಯಲ್ಲ. ಅಲ್ಲದೇ ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Tags:
error: Content is protected !!