Mysore
18
few clouds

Social Media

ಶನಿವಾರ, 07 ಫೆಬ್ರವರಿ 2026
Light
Dark

ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌

ಮೈಸೂರು: ಮೈಸೂರು-ಕೊಡಗು ಅಭಿವೃದ್ಧಿ ಯೋಜನೆಗಳಿಗೆ ಸಹಕರಿಸಿ, ಅವುಗಳನ್ನು ಬೆಂಬಲಿಸಿ ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಅವರಿಗೆ ಧನ್ಯವಾದ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಸರ್ಕಾರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿˌ ಮೈಸೂರಿನಲ್ಲಿರುವ ರೈಲ್ವೆ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಪೂರ್ಣಗೊಳಿಸಲು ಹಾಗೂ ಐತಿಹಾಸಿಕ ಮೈಸೂರು ರೈಲ್ವೆ ನಿಲ್ದಾಣದ ಆಧುನೀಕರಣಗೊಳಿಸುವ ಕುರಿತು ಮತ್ತು ಮೈಸೂರಿನಲ್ಲಿ ವಿಮಾನ ನಿಲ್ದಾಣದ ವಿಸ್ತರಣೆಗೆ ಅನುಕೂಲವಾಗುವಂತೆ ರೈಲ್ವೆ ಹಳಿಗಳ ಸ್ಥಳಾಂತರ ವಿಷಯದ ಕುರಿತು ಸಚಿವರಿಗೆ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಅವರು ಸದರಿ ಯೋಜನೆಗಳ ತ್ವರಿತ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಭರವಸೆ ನೀಡಿದರು ಎಂದಿದ್ದಾರೆ.

ನಮ್ಮ ಎಲ್ಲಾ ಬೇಡಿಕೆಗಳಿಗೆˌ ಮೈಸೂರಿನ ಅಭಿವೃದ್ದಿ ಯೋಜನೆಗಳಿಗೆ ಸಹಕರಿಸಿ, ಬೆಂಬಲಿಸಿ, ಅವುಗಳನ್ನು ಶೀಘ್ರ ಅನುಷ್ಠಾನಕ್ಕೆ ತರಲು ನೆರವಾಗುತ್ತಿರುವ ಸಚಿವರಿಗೆ ಈ ಮೂಲಕ ಮೈಸೂರು-ಕೊಡಗು ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಹೇಳಿದ್ದಾರೆ.

Tags:
error: Content is protected !!