Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ನಳಿನ್‌ ಕುಮಾರ್‌ ಕಟೀಲ್‌ಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್‌ ಕುಮಾರ್‌ ಕಟೀಲ್‌ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಪ್ರಾರ್ಥನೆ ಮಾಡಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದೇನು?

ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮಿತ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾರೆ, ಝೀರೋ ಆಗಿರರುವರು ಹೀರೋ ಆಗುತ್ತಾರೆ. ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ ಎಂದು ಹೇಳಿದರು.

ನಾನು ಹಾಗೂ ನಳೀನ್‌ ಅವರು ಒಂದೇ ವೇದಿಕೆಯಲ್ಲಿ ದೇವರನ್ನು ಪ್ರಾರ್ಥಿಸಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಜನಪ್ರತಿನಿಧಿಯಾಗಿ ಸೇವೆ ಮಾಡುವ ಅವಕಾಶ ಕೊಡಲಿ. ಇನ್ನೊಮ್ಮೆ ರಾಜಕೀಯದಲ್ಲಿ ನಿಮಗೆ ಅವಕಾಶ ಸಿಗಲಿಯೆಂದು ನಾನೂ ಸಹ ಪ್ರಾರ್ಥನೆ ಮಾಡುತ್ತೇನೆ ಎಂದರು.

Tags:
error: Content is protected !!