Mysore
30
few clouds

Social Media

ಗುರುವಾರ, 15 ಜನವರಿ 2026
Light
Dark

ಮೈಸೂರು | ʼಗ್ಯಾರಂಟಿʼ ಸಮನ್ವಯ ಸಾಧಿಸಿ

ಮೈಸೂರು : ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಜನರ ಜೀವನ ಮಟ್ಟವನ್ನು ಸುಧಾರಿಸಲು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಅರುಣ್ ಕುಮಾರ್  ಹೇಳಿದರು.

ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ 5 ಗ್ಯಾರಂಟಿ ಯೋಜನೆಗನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಎಲ್ಲರೂ ಸಮನ್ವಯದಿಂದ ಕೆಲಸ ಮಾಡಬೇಕು ತಾಂತ್ರಿಕ ಸಮಸ್ಯೆಗಳಿಗೆ ತಕ್ಷಣದಿಂದ ಪರಿಹಾರ ಕ್ರಮಕೈಗೊಂಡು ಅರ್ಹ ಫಲಾನುಭಗಳಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳುಬೇಕು ಎಂದರು.

ಸಭೆಯಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗ ಯುಕೇಶ್ ಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷರುಗಳು, ಸದಸ್ಯರುಗಳು ಹಾಗೂ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು ಗ್ಯಾರಂಟಿ ಯೋಜನೆಗಳ ಯಶೋಗತ ಯಶೋಗಾಥೆಗಳು, ವಿಡಿಯೋ ತುಣುಕುಗಳನ್ನು ಸಭೆಯಲ್ಲಿ ಪ್ರದರ್ಶಿಸಲಾಯಿತು.

Tags:
error: Content is protected !!