Mysore
29
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

ಶ್ರೀಲಂಕಾದಿಂದ 11 ಭಾರತೀಯ ಮೀನುಗಾರರ ಬಿಡುಗಡೆ

ಕೊಲಂಬೊ: ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾ ಭೇಟಿಯ ಬೆನ್ನಲ್ಲೇ ಶ್ರೀಲಂಕಾ ಸರ್ಕಾರ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಶ್ರೀಲಂಕಾ ಸರ್ಕಾರ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿಯನ್ನು ಗೌರವಿಸುವ ವಿಶೇಷ ಸೂಚನೆಯಾಗಿ 11 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಿದೆ ಎಂದು ಹೇಳಿದೆ.

ಮೀನುಗಾರರ ಬಂಧನದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಕಳವಳ ವ್ಯಕ್ತಪಡಿಸಿದ ಒಂದು ದಿನದ ನಂತರ ಅಧಿಕಾರಿಗಳು ಮೀನುಗಾರರನ್ನು ಬಿಡುಗಡೆ ಮಾಡಿದ್ದಾರೆ.

ಮಾಹಿತಿ ಪ್ರಕಾರ ಶ್ರೀಲಂಕಾ 2024ರಲ್ಲಿ 528ಕ್ಕೂ ಹೆಚ್ಚು ಭಾರತೀಯ ಮೀನುಗಾರರನ್ನು ಬಂಧಿಸಿದೆ.

ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಲಂಕಾ ಅಧ್ಯಕ್ಷ ಅನುರ್‌ ಕುಮಾರ್‌ ದಿಸಾನಾಯಕೆಯೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದರು.

ನಾವು ಮೀನುಗಾರರು ಮತ್ತು ಅವರ ದೋಣಿಗಳನ್ನು ತಕ್ಷಣ ಬಿಡುಗಡೆ ಮಾಡುವುದರ ಬಗ್ಗೆ ಒತ್ತು ನೀಡಿದ್ದೇವೆ ಎಂದು ಹೇಳಿದ್ದರು.

ಈ ಹಿನ್ನೆಲೆಯಲ್ಲಿ ಮೋದಿ ಭೇಟಿಯನ್ನು ಗೌರವಿಸಲು ಕನಿಷ್ಠ 11 ಮಂದಿ ಭಾರತೀಯ ಮೀನುಗಾರರನ್ನು ವಿಶೇಷ ಆದ್ಯತೆ ಮೇರೆಗೆ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದೆ.

 

Tags:
error: Content is protected !!