Mysore
22
clear sky

Social Media

ಬುಧವಾರ, 28 ಜನವರಿ 2026
Light
Dark

ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ: ಡಿ.ವಿ.ಸದಾನಂದಗೌಡ ಆಕ್ರೋಶ

ಪ್ರಶಾಂತ್‌ ಎನ್‌ ಮಲ್ಲಿಕ್‌

ಮೈಸೂರು: ರಾಜ್ಯದಲ್ಲಿ ಬೀಸುವ ಗಾಳಿ ಬಿಟ್ಟು ಎಲ್ಲದರ ಮೇಲೂ ಟ್ಯಾಕ್ಸ್‌ ಹಾಕಲಾಗುತ್ತಿದೆ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಅವರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ಕುರಿತು ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಕೆಲಸ ವಿಧಾನಸಭೆಯಲ್ಲಿ ನಡೆಯಬೇಕು. ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅದರ ಮಹತ್ವವನ್ನು ಆಳು ಮಾಡಿದೆ. ರಾಜ್ಯದಲ್ಲೂ ಎಗ್ಗಿಲ್ಲದೇ ಲೂಟಿಗಳು ನಡೆಯುತ್ತಿವೆ. ದುಷ್ಕರ್ಮಿಗಳು ಹಸುವಿನ ಕೆಚ್ಚಲು ಕುಯ್ಯುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಲು ಸದನದಲ್ಲಿ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರ ಬೀಸುವ ಗಾಳಿಯನ್ನು ಬಿಟ್ಟು ಎಲ್ಲದರ ಮೇಲೆ ಟ್ಯಾಕ್ಸ್ ಹಾಕುವ ಕೆಲಸ ಮಾಡಿದೆ. ಇದಕ್ಕಾಗಿ ಬಿಜೆಪಿ ವತಿಯಿಂದ ಜನರ ಬಳಿ ತೆರಳಿ ನೀಚ ಸರ್ಕಾರದ ಬಗ್ಗೆ ತಿಳಿಸುವ ಕೆಲಸ ಮಾಡಲಾಗುತ್ತಿದೆ. ಇದು ಜನರಿಗಾಗಿ ನಡೆಯುವ ಹೋರಾಟವಾಗಿದೆ. ಹೀಗಾಗಿ ನಮ್ಮ ಪಕ್ಷದ ಕಾರ್ಯಕರ್ತರು ಕೈ ಜೋಡಿಸಿ, ಮನೆ ಮನೆಗೆ ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ತಿಳಿಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

Tags:
error: Content is protected !!