Mysore
24
few clouds

Social Media

ಮಂಗಳವಾರ, 14 ಏಪ್ರಿಲ 2026
Light
Dark

ಮೈಸೂರು| ಪಿಯುಸಿ ಪರೀಕ್ಷೆಯಲ್ಲಿ ಫೇಲ್:‌ ವಿದ್ಯಾರ್ಥಿನಿ ನೇಣಿಗೆ ಶರಣು

ಮೈಸೂರು: ಪಿಯುಸಿ ಪರೀಕ್ಷೆಯಲ್ಲಿ ಫೇಲ್‌ ಆದ ಪರಿಣಾಮ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಕಲಾಮಂದಿರದ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಐಶ್ವರ್ಯ ಎಂಬುವವಳೇ ಆತ್ಮಹತ್ಯೆಗೆ ಶರಣಾಗಿರುವ ವಿದ್ಯಾರ್ಥಿನಿಯಾಗಿದ್ದಾಳೆ. ಇಂದು ಮಧ್ಯಾಹ್ನದ ವೇಳೆ ಹೊರಬಿದ್ದ ಪಿಯುಸಿ ಫಲಿತಾಂಶದಲ್ಲಿ ಐಶ್ವರ್ಯ ಫೇಲ್‌ ಆಗಿದ್ದಳು.

ಇದರಿಂದ ತೀವ್ರ ಮನನೊಂದಿದ್ದ ಐಶ್ವರ್ಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಮೃತ ಶವವನ್ನು ಮರಣೋತ್ತರ ಪರೀಕ್ಷೆಗೆಂದು ಕೆ.ಆರ್.ಆಸ್ಪತ್ರೆಗೆ ರವಾನಿಸಿದ್ದಾರೆ.

 

Tags:
error: Content is protected !!