Mysore
23
broken clouds

Social Media

ಶುಕ್ರವಾರ, 10 ಏಪ್ರಿಲ 2026
Light
Dark

ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಇ.ಡಿ ಮನವಿ ಮಾಡಿತ್ತು. ಅದರಂತೆ ಇಂದು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಮತ್ತೆ ಸಚಿವರಾಗಲು ಕನಸು ಕಾಣುತ್ತಿದ್ದ ನಾಗೇಂದ್ರಗೆ ಬಿಗ್‌ ಶಾಕ್‌ ಎದುರಾಗಿದೆ.

ಸದ್ಯ ಜಾಮೀನು ಪಡೆದು ಹೊರ ಬಂದಿರುವ ನಾಗೇಂದ್ರಗೆ ಈಗ ಮತ್ತೆ ಇಡಿ ಶಾಕ್‌ ಎದುರಾಗಿದ್ದು, ಈ ಪ್ರಕರಣ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

 

Tags:
error: Content is protected !!