ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕ್ಯಾತಮಾರನಹಳ್ಳಿ 4ನೇ ಹಂತದ ಕಲ್ಯಾಣಗಿರಿ ನಗರ ಬಡಾವಣೆಯನ್ನು ನಿರ್ಮಿಸಲಾಗಿದೆ. ಇಲ್ಲಿನ ವಾಸದ ಮನೆಗಳ ಪಕ್ಕ ಇರುವ ನಿವೇಶನಗಳಲ್ಲಿ ಗಿಡಗಂಟೆಗಳು ಬೆಳೆದು, ಕಸ ಸುರಿಯುವ ತಾಣವಾಗಿ ಮಾರ್ಪಟ್ಟಿದ್ದು, ಸೊಳ್ಳೆ ನೋಟಗಳ ಹಾವಳಿ ಮಿತಿ ಮೀರಿದೆ. ಪೊದೆಯಲ್ಲಿ ವಿಷಜಂತುಗಳು ಸೇರಿಕೊಂಡರೂ ಗೊತ್ತಾಗುವುದಿಲ್ಲ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಖಾಲಿ ನಿದೇಶನಗಳಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ.
ಎನ್.ಮಹೇಶ್, ಕಲ್ಯಾಣಗಿರಿನಗರ, ಮೈಸೂರು





