ತುಮಕೂರು: ತುಮಕೂರು ರೈಲ್ವೆ ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಸಿದ್ದಗಂಗಾ ಮಠದಲ್ಲಿ ಇಂದು ಮಾತನಾಡಿದ ಅವರು, ತುಮಕೂರು ರೈಲ್ವೆ ನಿಲ್ದಾಣಕ್ಕೆ ಶ್ರೀಗಳ ಹೆಸರಿಡುವಂತೆ ಕೇಂದ್ರ ಸಚಿವ ವಿ.ಸೋಮಣ್ಣ ಕೂಡ ಮನವಿ ಮಾಡಿದ್ದಾರೆ. ಶ್ರೀಗಳ ಹೆಸರಿಡಲು ಕೇಂದ್ರದಿಂದ ಕೂಡ ಒಪ್ಪಿಗೆ ಸಿಗಬೇಕು ಎಂದರು.
ಶ್ರೀಗಳ ಹೆಸರಿಡುವ ವಿಚಾರದಲ್ಲಿ ವಿಳಂಬವಾಗಿಲ್ಲ. ಯಾವುದೇ ಒಂದು ಸಾರ್ವಜನಿಕ ಸ್ಥಳಗಳಿಗೆ ಹೆಸರಿಡಬೇಕಾದರೆ ಕೆಲವು ನಿಯಮಗಳಿರುತ್ತವೆ. ಪ್ರಸ್ತಾವನೆಗಳು ಬಂದಾಗ ಅದರ ಸಾಧಕ-ಬಾಧಕಗಳನ್ನು ನೋಡಬೇಕಾಗುತ್ತದೆ. ಎಲ್ಲವನ್ನು ಪರಿಶೀಲಿಸಿದ ನಂತರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಎಂದು ತಿಳಿಸಿದರು.





