ಮೈಸೂರು: ಗ್ಯಾಸ್ ಸಿಲಿಂಡರ್ ದರ ಏರಿಕೆ ಖಂಡಿಸಿ ಮೈಸೂರಿನಲ್ಲಿಂದು ಜಿಲ್ಲಾ ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಖಾಲಿ ಸಿಲಿಂಡರ್ ಪ್ರದರ್ಶಿಸಿ, ಸೌದೆ ಒಲೆ ಇಟ್ಟು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಜನ ಸಾಮಾನ್ಯರ ರಕ್ತ ಹೀರುತ್ತಿರುವ ಕೇಂದ್ರ ಸರ್ಕಾರ ಎಂದು ಅಣಕು ಪ್ರದರ್ಶನ ಮಾಡಿದರು.
ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವಾರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು.





