Mysore
21
few clouds

Social Media

ಗುರುವಾರ, 20 ಆಗಸ್ಟ್ 2026
Light
Dark

ವಿರೋಧದ ನಡುವೆಯು ಜಾತಿ ಗಣತಿ ವರದಿ ಮಂಡನೆ ಸಾಧ್ಯತೆ

ಬೆಂಗಳೂರು: ಸಾಕಷ್ಟು ಪರ-ವಿರೋಧದ ಚರ್ಚೆಗಳ ನಡುವೆ ಜಾತಿಗಣತಿ ವರದಿಯನ್ನು ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಹೆಚ್‌.ಕಾಂತರಾಜ್‌ ನೇತೃತ್ವದದಲ್ಲಿ 2015ರಂದು ರಾಜ್ಯಾದ್ಯಾಂತ ನಡೆಸಿದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಧ್ಯಯನ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗವು 2024ರ ಫೆಬ್ರವರಿ 29ರಂದು ಮುಚ್ಚಿದ ಲಕೋಟೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.

ಇದೀಗ ವರದಿಯ ಲಕೋಟೆಯನ್ನು ತೆರೆದು ಪರಿಶೀಲಿಸಲು ಅನುಮೋದನೆ ಕೋರಿ ಪ್ರಸ್ತಾಪಿಸಲಾಗಿದೆ.

ರಾಜ್ಯದಲ್ಲಿ ಮೀಸಲಾತಿ ವಿಚಾರವಾಗಿ ಗೊಂದಲವಿದ್ದ ಕಾರಣ ಜಾತಿ ವಿವರವೂ ಒಳಗೊಂಡಂತೆ ಒಟ್ಟು 54 ಮಾನದಂಡಗಳನ್ನಿಟ್ಟುಕೊಂಡು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಸಮೀಕ್ಷೆ ನಡೆಸಿ ಮಾಹಿತಿ ಸಂಗ್ರಹಿಸಲಾಗಿತ್ತು. ಈ ವರದಿ ನಾಳೆ ವಿಧಾನಸೌಧದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ.

 

Tags:
error: Content is protected !!