ರಾಜ್ಯ ಸರ್ಕಾರ ಹಾಲು, ಮೊಸರು, ವಿದ್ಯುತ್, ಮೊದಲಾದ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದರ ವಿರುದ್ಧ, ಬಿಜೆಪಿ ನಾಯಕರು ಜನಾಕ್ರೋಶ ಯಾತ್ರೆ ನಡೆಸುತ್ತಿದ್ದಾರೆ.
ಇದೇ ವೇಳೆ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವೂ ಪ್ರತಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು ರೂ.೫೦, ಪೆಟ್ರೋಲ್ ಮತ್ತು ಡಿಸೇಲ್‌ನ ಅಬಕಾರಿ ಸುಂಕವನ್ನು ೨ ರೂ. ಹೆಚ್ಚಳ ಮಾಡಿದ್ದು, ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪೈಪೋಟಿಗೆ ಬಿದ್ದವರಂತೆ ಕಾಣುತ್ತಿವೆ. ಇದರಿಂದ ಜನಸಾಮಾನ್ಯರಿಗೆ ಜೀವನ ನಿರ್ವಹಣೆ ಮಾಡುವುದೇ ಕಷ್ಟವಾಗಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ ಮೈಸೂರು





