ಬೆಂಗಳೂರು: ಜಾತಿ ಗಣತಿ ವರದಿಯನ್ನು ಇಂದಿನ ಕ್ಯಾಬಿನೆಟ್ ಸಭೆಯಲ್ಲಿ ಮಂಡಿಸಿದ್ದು, ಜಾತಿ ಗಣತಿ ವರದಿ ಬಗ್ಗೆ ಚರ್ಚಿಸಲು ಏಪ್ರಿಲ್.17ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಏಪ್ರಿಲ್.11) ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ 2015ರಲ್ಲಿ ನಡೆಸಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆಧಾರಿತ ಜಾತಿ ಗಣತಿ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ. ಆದರೆ ಈ ವೇಳೆ ಕೇವಲ ವರದಿಯನ್ನಷ್ಟೇ ಮಂಡಿಸಲಾಗಿದ್ದು, ಸಚಿವರು ಯಾವುದೇ ಪರ-ವಿರೋಧ ಚರ್ಚೆ ಮಾಡಿಲ್ಲ. ಹೀಗಾಗಿ ಜಾತಿ ಗಣತಿ ವರದಿ ಅನುಷ್ಠಾನಗೊಳಿಸಿ ಜಾರಿಗೆ ತರಲಯ ಏಪ್ರಿಲ್.17 ರಂದು ವಿಶೇಷ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದೆ ಎಂದರು.
ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮುಚ್ಚಿದ ಲಕೋಟೆಯನ್ನು ತೆರೆದು ಕ್ಯಾಬಿನೆಟ್ ಸಭೆಯಲ್ಲಿ ಸಚಿವರ ಅಭಿಪ್ರಾಯಗಳನ್ನು ಆಲಿಸಿದರು. ಬಳಿಕ ಏಪ್ರಿಲ್.17ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಜಾರಿಗೊಳಿಸುವ ಬಗ್ಗೆ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು.





