Mysore
27
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಉಗ್ರ ಒಳನುಸುಳುವಿಕೆ ತಡೆಯುವ ಯತ್ನ ; ಎನ್‌ಕೌಂಟರ್‌ ವೇಳೆ ಯೋಧ ಹುತಾತ್ಮ

ಶ್ರೀನಗರ : ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದು, ಸೇನೆ ನಡೆಸಿದ ಕಾರ್ಯಾಚಾರಣೆಯಲ್ಲಿ ಮೂವರು ಉಗ್ರರನ್ನು ಸೆದೆಬಡಿಯಲಾಗಿದೆ.

ಹುತಾತ್ಮ ಸೇನಾಧಿಕಾರಿಯನ್ನು ಕುಲದೀಪ್ ಚಂದ್ ಎಂದು ಗುರ್ತಿಸಲಾಗಿದೆ. ಇನ್ನು ಹತರಾದ ಉಗ್ರರ ಪೈಕಿ ಓರ್ವ ಜೈಶ್-ಎ-ಮೊಹಮ್ಮದ್‍ನ ಕಮಾಂಡರ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಈತ ಹಲವಾರು ತಿಂಗಳುಗಳಿಂದ ಈ ಪ್ರದೇಶದಲ್ಲಿ ಸಕ್ರಿಯನಾಗಿದ್ದನು. ಸೈಫುಲ್ಲಾ ಜೈಶ್-ಎ-ಮೊಹಮ್ಮದ್‍ನ ಕಮಾಂಡರ್ ಆಗಿದ್ದು, ಕಿಶ್ತ್ವಾರ್ ಪ್ರದೇಶದಲ್ಲಿ ಈತ ಉಗ್ರ ಸಂಘಟನೆಯನ್ನು ಮುನ್ನಡೆಸುತ್ತಿದ್ದ, ಈತನ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ತಿಳಿದು ಕಾರ್ಯಾಚರಣೆ ಮಾಡಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಸಿಬ್ಬಂದಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಕಾರ್ಯಾಚರಣೆಯ ಸ್ಥಳದಿಂದ ಶಸ್ತ್ರಾಸ್ತ್ರಗಳು, ಗುಂಡಿನ ಸಾಮಗ್ರಿಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕಿಶ್ತ್ವಾರ್ ಜಿಲ್ಲೆಯ ಚತ್ರು ಅರಣ್ಯ ಪ್ರದೇಶದಲ್ಲಿ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ಪ್ರಾರಂಭಿಸಿತ್ತು.

Tags:
error: Content is protected !!