ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು.
ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ ಸಿಕ್ಕಿದೆ. ಹಾಗಾಗಿ ಘಾಟಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದೇನೆ. ನಾನು 30 ವರ್ಷದ ಹಿಂದೆ ಇಲ್ಲಿ ಸರ್ಪ ಸಂಸ್ಕಾರ ಮಾಡಿಸಿದ್ದೇನೆ. ದೇವಾಲಯದ ಅಭಿವೃದ್ಧಿಯನ್ನು ಸಹ ಮಾಡಲಾಗುವುದು ಎಂದು ಹೇಳಿದರು.
ಇನ್ನು ಜಾತಿಗಣತಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ವರದಿಯನ್ನು ನೋಡಿಲ್ಲ. ಅದು ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗಬೇಕು. ಆತುರದ ನಿರ್ಧಾರವನ್ನು ಯಾರೂ ತೆಗೆದುಕೊಳ್ಳುವುದಿಲ್ಲ. ಕೆಲವರು ರಾಜಕೀಯ ಹೇಳಿಕೆ ಕೊಡುತ್ತಿದ್ದಾರೆ ಎಂದು ಕಿಡಿಕಾರಿದರು.





