Mysore
32
few clouds

Social Media

ಶುಕ್ರವಾರ, 17 ಏಪ್ರಿಲ 2026
Light
Dark

ಭೀಮಹೆಜ್ಜೆಯನ್ನು ಅನೈತಿಕ ಯಾತ್ರೆ ಎಂದ ಎಚ್‌ಸಿಎಂ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಡೆಸುತ್ತಿರುವ ಭೀಮ ಹೆಜ್ಜೆ ಯಾತ್ರೆ ಬಿಜೆಪಿಗರ ಅನೈತಿಕ ಯಾತ್ರೆಯಾಗಿದೆ ಎಂದು ಹೇಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ವಿರುದ್ಧ ವಿರೋಧ ಪಕ್ಷದ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬಾಬಾ ಸಾಹೇಬ್‌ ಅಂಬೇಡ್ಕರ್‌ ವಿರುದ್ಧ ಅಭ್ಯರ್ಥಿ ಹಾಕಿದ್ದು ಕಾಂಗ್ರೆಸ್‌ ಪಕ್ಷ. ಅಂಬೇಡ್ಕರ್‌ ಅವರ ಸೋಲಿಗೆ ಎಲ್ಲಾ ಬಗೆಯ ತಂತ್ರಗಾರಿಕೆಯನ್ನು ಹೆಣೆದಿದ್ದು ಕಾಂಗ್ರೆಸ್‌ ಪಕ್ಷ. ಅಂಬೇಡ್ಕರ್‌ ಅವರನ್ನು ಸೋಲಿಸಲು ನಾರಾಯಣ ಸದೋಬಾ ಕರ್ಜೋಲ್ಕರ್‌ಗೆ ಸಂಪನ್ಮೂಲ ಒದಗಿಸಿದ್ದು ಕೂಡ ಕಾಂಗ್ರೆಸ್‌ ಪಕ್ಷ. ಅಂಬೇಡ್ಕರ್‌ ಅವರನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಬಹುಮಾನ ಕೊಟ್ಟಿದ್ದೂ ಕೂಡ ಕಾಂಗ್ರೆಸ್‌ ಪಕ್ಷವೇ ಎಂದು ಕಿಡಿಕಾರಿದ್ದಾರೆ.

ಅಂಬೇಡ್ಕರ್‌ ಅವರ ಸೋಲಿಗೆ ಇಷ್ಟೆಲ್ಲಾ ಕುತಂತ್ರ, ಹುನ್ನಾರ ಮಾಡಿ ಅವರಿಗೆ ಭಾರತ ರತ್ನವನ್ನು ನಿರಾಕರಣೆ ಮಾಡಿದ ಕಾಂಗ್ರೆಸ್‌ ಪಕ್ಷ ಇಂದು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಚುನಾವಣೆಯಲ್ಲಿ ಸೋಲಿಸಲು ವೀರ ಸಾವರ್ಕರ್‌ ಸಂಚು ಮಾಡಿದ್ದರು ಎಂದು ಹೇಳುವುದು ನಾಚಿಕೆಗೇಡಿನ ಪರಮಾವಧಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!