Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಜಾತಿಗಣತಿ ಬಗ್ಗೆ ವಿಚಾರ ತಿಳಿಯದೇ ಪ್ರತಿಕ್ರಿಯೆ ನೀಡಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ವರದಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೂ ಗೊತ್ತಿಲ್ಲದೇ ನಾನು ಪ್ರತಿಕ್ರಿಯೆ ನೀಡಲು ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ಈಗ ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಬೆಳವಣಿಗೆಗಳ ನಡುವೆ ಜಾತಿ ಗಣತಿ ವರದಿ ವಿಚಾರ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ನನಗೆ ವರದಿ ಸಿಕ್ಕಿಲ್ಲ. ಹೀಗಾಗಿ ಅದರಲ್ಲಿರುವ ಅಂಶಗಳ ಬಗ್ಗೆ ಮಾಹಿತಿ ಇಲ್ಲ. ಜಾತಿಜನಗಣತಿಯ ಬಗ್ಗೆ ವಿಚಾರ ತಿಳಿಯದೆ ತಾವು ಪ್ರತಿಕ್ರಿಯಿಸುವುದಿಲ್ಲ ಎಂದರು.

ಇದೇ ಏಪ್ರಿಲ್.17ರಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಂದು ಸ್ಪಷ್ಟವಾಗಿ ನಿರ್ಧಾರಗಳನ್ನು ತೆಗೆದುಕೊಂಡರೆ ಆಗ ನಾನು ಪ್ರತಿಕ್ರಿಯಿಸುತ್ತೇನೆ. ಅದಕ್ಕೂ ಮುಂಚೆ ಏನನ್ನೂ ಹೇಳಲು ಬಯಸುವುದಿಲ್ಲ ಎಂದು ಹೇಳಿದರು.

 

Tags:
error: Content is protected !!