Mysore
27
overcast clouds

Social Media

ಶನಿವಾರ, 18 ಜುಲೈ 2026
Light
Dark

ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಮತ್ತೆ ಕೊಲೆ ಬೆದರಿಕೆ ಸಂದೇಶ

ಮುಂಬೈ: ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಇಂದು ಮತ್ತೆ ಕೊಲೆ ಬೆದರಿಕೆ ಸಂದೇಶ ರವಾನೆಯಾಗಿದ್ದು, ಫ್ಯಾನ್ಸ್‌ ಆತಂಕಕ್ಕೆ ಒಳಗಾಗಿದ್ದಾರೆ.

ಮುಂಬೈನ್‌ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ಗೆ ನುಗ್ಗಿ ಅವರ ಕಾರನ್ನು ಸ್ಫೋಟಿಸುವ ಮೂಲಕ ಸಲ್ಮಾನ್‌ಖಾನ್‌ ಕೊಲೆ ಮಾಡುತ್ತೇವೆ ಎಂದು ವರ್ಲಿಯಲ್ಲಿರುವ ಸಾರಿಗೆ ಇಲಾಖೆ ವಾಟ್ಸಪ್‌ ನಂಬರ್‌ಗೆ ಸಂದೇಶ ಬಂದಿದೆ.

ಬೆದರಿಕೆ ಸಂದೇಶ ರವಾನಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಇದೀಗ ವರ್ಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಬೆದರಿಕೆಯ ಹೊಣೆಯನ್ನೂ ಯಾರು ಸಹ ಹೊತ್ತುಕೊಂಡಿಲ್ಲ. ಇನ್ನು ನಟ ಸಲ್ಮಾನ್‌ ಖಾನ್‌ ಅವರಾಗಲಿ ಹಾಗೂ ಅವರ ಕುಟುಂಬಸ್ಥರಾಗಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈ ಹಿಂದೆಯೂ ಹಲವು ಬಾರಿ ಸಲ್ಮಾನ್‌ ಖಾನ್‌ಗೆ ಬೆದರಿಕೆಗಳು ಬಂದಿದ್ದವು. ಗ್ಯಾಂಗ್‌ಸ್ಟರ್‌ ಬಿಷ್ಣೋಯ್‌ ಮತ್ತು ಗೋಲ್ಡಿ ಬ್ರಾರ್‌ ಗ್ಯಾಂಗ್‌ನಿಂದ ಬೆದರಿಕೆಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ನಟ ಸಲ್ಮಾನ್‌ ಖಾನ್‌ ಮನೆಯ ಸುತ್ತಮತ್ತ ಹಲವು ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Tags:
error: Content is protected !!