Mysore
19
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಪ್ರಾಣಿಗಳ ದೃಷ್ಟಿಯಿಂದ ಬಂಡೀಪುರದಲ್ಲಿ ರಾತ್ರಿ ಸಂಚಾರ ಬೇಡ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌

ಮೈಸೂರು: ವನ್ಯಜೀವಿಗಳ ಹಿತದೃಷ್ಟಿಯಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅಭಿಪ್ರಾಯ ಪಟ್ಟಿದ್ದಾರೆ.

ಕಳೆದ ಕೆಲ ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಹಾದುಹೋಗುವ ರಸ್ತೆಗೆ ರಾತ್ರಿ ಸಂಚಾರಕ್ಕೆ ಅವಕಾಶ ವಿಚಾರ ಭಾರೀ ಸದ್ದು ಮಾಡುತ್ತಿದೆ.

ಈ ವಿಚಾರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರಾಣಿಪ್ರಿಯರು ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು. ಇದರಿಂದ ವನ್ಯಜೀವಿಗಳಿಗೆ ಅಪಾಯ ಎದುರಾಗುತ್ತಿದೆ. ಜೊತೆಗೆ ಪ್ರಾಣಿ ಬೇಟೆ ಸೇರಿದಂತೆ ಅಕ್ರಮ ಚಟುವಟಿಕೆಗಳು ಜಾಸ್ತಿಯಾಗುತ್ತವೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ವೇಳೆ ಮಾತನಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು, ಯಾವುದೇ ಕಾರಣಕ್ಕೂ ರಾತ್ರಿ ಸಂಚಾರಕ್ಕೆ ಅನುಮತಿ ಕೊಡಬಾರದು. ರಸ್ತೆಯಲ್ಲಿ ರಾತ್ರಿ ಸಂಚಾರದ ಅವಶ್ಯಕತೆ ಇಲ್ಲ. ಪ್ರಾಣಿಗಳ ದೃಷ್ಟಿಯಿಂದ ರಾತ್ರಿ ಸಂಚಾರ ಬೇಡ. ಸಂಚಾರಕ್ಕೆ ಈಗ ಇರುವಷ್ಟು ಅವಧಿ ಸಾಕು ಎಂದು ಹೇಳಿದ್ದಾರೆ.

Tags:
error: Content is protected !!