Mysore
36
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

ಪಿಡಿಒ ಸೇರಿ ಇತರ ನೌಕರರ ಕೌನ್ಸೆಲಿಂಗ್ ಮೂಲಕ ವರ್ಗಾವಣೆಗೆ ಅಧಿಸೂಚನೆ: ಪ್ರಿಯಾಂಕ್ ಖರ್ಗೆ

counseling gram panchayat priyank kharge

ಬೆಂಗಳೂರು : ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 1 ಮತ್ತು 2 ಹಾಗೂ ದ್ವಿತೀಯ ದರ್ಜೆ ಲೆಕ್ಕಸಹಾಯಕರ ವರ್ಗಾವಣೆಗಳನ್ನು ಕೌನ್ಸಿಲಿಂಗ್ ಮೂಲಕ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇದನ್ನೂ ಓದಿ:- ಗಾಳಿ, ಮಳೆಯ ವೇಳೆ ವಿದ್ಯುತ್ ಅನಾಹುತ ತಪ್ಪಿಸಲು ಸೆಸ್ಕ್ ಸನ್ನದ್ದ

ವರ್ಗಾವಣೆ ನಿಯಮಗಳ ನಿಯಮ 9ರ ಅನ್ವಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಾರ್ವಜನಿಕ ಹಿತಾಸಕ್ತಿಯ ಹಾಗೂ ಕೋರಿಕೆ ವರ್ಗಾವಣೆಗಳನ್ನು ಸಾಮಾನ್ಯವಾಗಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಮತ್ತು ಮೇ ಮಾಹೆಗಳ ನಡುವಿನಲ್ಲಿ ಮಾಡಬಹುದು ಅಥವಾ ಅಸಾಧಾರಣ ಸಂದರ್ಭಗಳಲ್ಲಿ ಸರ್ಕಾರವು ಅಧಿಸೂಚಿಸಿದಂತೆ ಮಾಡಬಹುದಾಗಿರುತ್ತದೆ ಎಂದು ತಿಳಿಸಿರುವ ಸಚಿವರು 2025-26 ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಏಪ್ರಿಲ್‌ 17 ರಿಂದ ಮೇ 13ರೊಳಗೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Tags:
error: Content is protected !!