ಮೈಸೂರು: ದೇವರ ದರ್ಶನಕ್ಕೆ ಬಂದಿದ್ದ ಆಂಧ್ರ ಮೂಲದ ಕಾರೊಂದು ಪಲ್ಟಿಯಾಗಿರುವ ಘಟನೆ ಚಾಮುಂಡಿಬೆಟ್ಟದಲ್ಲಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಡಾ.ಬಿ.ಆರ್.ಅಂಬೇಡ್ಕರ್‌ಗೆ ಅಪಮಾನ: ಬೀದಿಗಿಳಿದು ಪ್ರತಿಭಟನೆ ನಡೆಸಿದ ಮಹಿಳೆಯರು
ಬೆಂಗಳೂರಿನಲ್ಲಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಆಂಧ್ರ ಮೂಲದ ಕುಟುಂಬವೊಂದು ಇಂದು ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆಯಲು ಬಂದಿತ್ತು. ಮಗು ವಾಂತಿ ಮಾಡುವ ವೇಳೆ ಚಾಲಕ ರಸ್ತೆಯ ಎಡಗಡೆ ಕಾರು ತಿರುಗಿಸಿದ್ದಾನೆ. ಇದೇ ವೇಳೆ ತಡೆಗೋಡೆಗೆ ಗುದ್ದಿದ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಸಂಬಂಧ ಸಿದ್ದಾರ್ಥ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಮೈಸೂರು| ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಿದ ಪತ್ನಿ





