Mysore
20
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಮೈಸೂರು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಮಳೆ ಸಾಧ್ಯತೆ ; ಹವಾಮಾನ ಇಲಾಖೆ

weather report mysuru

ಮೈಸೂರು: ಮೈಸೂರು, ಕೊಡಗು ಸೇರಿದಂತೆ ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಿರುವ ಇಲಾಖೆ ಮುನ್ನಚ್ಚೆರಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕೊಪ್ಪಳ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣಹವೆ ಇರಲಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ:- ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ ಖಂಡಿಸಿ ವಿಪರ ಪ್ರತಿಭಟನೆ

ಕರಾವಳಿಯ ದಕ್ಷಿಣ ಕ ನ್ನಡ, ಉಡುಪಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಜೋರು ಮಳೆ ಸುರಿಯಲಿದೆ.

ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಸಹಿತ ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags:
error: Content is protected !!