ಬೆಂಗಳೂರು: ರೋಹಿತ್ ವೆಮುಲಾ (Rohit Vemula) ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ ಎಂದು ಪಕ್ಷದ ವರಿಷ್ಠ ರಾಹುಲ್ ಗಾಂಧಿಯವರಿಗೆ ಪತ್ರ ಬರೆಯಲಾಗಿದ್ದು, ಈ ಕುರಿತು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು(ಏ.21) ಮಾಧ್ಯಮದವರೊಂದಿಗೆ ಮಾತನಾಡಿದರು. ಇನ್ನೂ ಸಿಇಟಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಬಗ್ಗೆ ಮಾತನಾಡಿದ ಸಿಎಂ, ಈ ವಿಚಾರದಲ್ಲಿ ತಪ್ಪು ಮಾಡಿದವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.
ಇದನ್ನೂ ಓದಿ:– ಪ್ರಮಾಣಿಕ ಕರ್ತವ್ಯಪ್ರಜ್ಞೆ ; ಸರ್ಕಾರಿ ನೌಕರರ ಬಗ್ಗೆ ಸಿಎಂ ಮೆಚ್ಚುಗೆ
ಜನಿವಾರದ ವಿಚಾರದಲ್ಲಿ ಯಾರು ತಪ್ಪು ಮಾಡಿದ್ದಾರೋ ಅಂತವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ಕೊಡಲಾಗಿದೆ. ಪರೀಕ್ಷಾ ನಿಯಮ ಮೀರಿ ವರ್ತಿಸಿರುವ ಹಾಗೂ ತಪ್ಪೆಸಗಿರುವ ಅಧಿಕಾರಿಗಳ ವಿರುದ್ಧ ಕ್ರಮವಾಗಲಿದೆ ಎಂದು ಹೇಳಿದರು.
ಇದನ್ನೂ ಓದಿ:- ಮರು ಜಾತಿಗಣತಿ ಅನಗತ್ಯ ; ಎಂಎಲ್‌ಸಿ ಯತೀಂದ್ರ





