ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರನ್ನು ನಿನ್ನೆ ಪತ್ನಿಯೇ ಕೊಲೆ ಮಾಡಿದ್ದರು. ಪ್ರಕರಣ ಸಂಬಂಧ ಈಗಾಗಲೇ ಪತ್ನಿ ಪಲ್ಲವಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ನಡುವೆ ಓಂ ಪ್ರಕಾಶ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಟೆನ್ನಿಸ್ ಕೋರ್ಟ್‌ನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು.
ಸುದ್ದಿ ಹಿನ್ನೆಲೆ:- ನಿವೃತ್ತ DGP ಹತ್ಯೆ ಪ್ರಕರಣ: ತನಿಖಾಧಿಕಾರಿ ಎಗ್ರರು ಹತ್ಯೆ ರಹಸ್ಯ ಬಿಚ್ಚಿಟ್ಟ ಪತ್ನಿ ಪಲ್ಲವಿ
ಈ ವೇಳೆ ಸಂಬಂಧಿಕರು, ಸ್ನೇಹಿತರು, ಹಿರಿಯ ಪೊಲೀಸ್ ಅಧಿಕಾರಿಗಳು, ಸಚಿವರು ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಬಳಿಕ ಪಾರ್ಥಿವ ಶರೀರವನ್ನು ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ತಂದು ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಓಂ ಪ್ರಕಾಶ್ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.
ಬಳಿಕ ಪುತ್ರ ಕಾರ್ತಿಕೇಶ್ ಅಂತಿಮ ವಿಧಿ-ವಿಧಾನ ನೆರವೇರಿಸಿ ಪಾರ್ಥಿವ ಶರೀರಕ್ಕೆ ಅಗ್ನಿಸ್ಪರ್ಶ ಮಾಡಿದರು.





