Mysore
28
few clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಭೀಕರ ಪ್ರವಾಹಕ್ಕೆ ತತ್ತರಿಸಿದ ಜಮ್ಮು-ಕಾಶ್ಮೀರ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭೀಕರ ಪ್ರವಾಹಕ್ಕೆ ಸಿಲುಕಿ ಮನೆ ಹಾಗೂ ಕಟ್ಟಡಗಳು ಕೊಚ್ಚಿ ಹೋಗಿದ್ದು, ಹಲವರು ಕಣ್ಮರೆಯಾಗಿದ್ದಾರೆ.

ಪ್ರವಾಹ ಪರಿಸ್ಥಿತಿ ಹಾಗೂ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರ ಬಂದ್‌ ಆಗಿದ್ದು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗಿದ್ದು, ಮುಂದಿನ 24 ಗಂಟೆಯವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ನಿರಾಶ್ರಿತರಿಗೆ ಸರ್ಕಾರಿ ಶಾಲೆಗಳಲ್ಲಿ ವಸತಿ ವ್ಯವಸ್ಥೆ ಮಾಡಲಾಗಿದ್ದು, ಸರ್ಕಾರದಿಂದಲೇ ಆಹಾರ ಹಾಗೂ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುತ್ತಿದೆ.

 

Tags:
error: Content is protected !!