Mysore
24
mist

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮೋದಿ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಹಿಂದೂ ವಿರೋಧಿ ಮನಸ್ಥಿತಿಯ ಕಾಂಗ್ರೆಸ್ಸಿಗರು ಇಂತಹ ವಿಚಾರದಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದರು.

ಕಾಂಗ್ರೆಸ್‌ ನಾಯಕರಿಗೆ ಪಹಲ್ಗಾಮ್‌ನಲ್ಲಿ ಬಲಿಯಾದವರು ಕೇವಲ ಪ್ರವಾಸಿಗರಾಗಿ ಕಾಣುತ್ತಿದ್ದಾರೆ. ಅವರು ಹಿಂದುಗಳಾಗಿ ಕಾಣುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಶ್ಮೀರದಲ್ಲಿ ಭಯೋತ್ಪಾದಕರು ಹಿಂದುಗಳನ್ನು ಗುರಿಯಾಗಿಸಿ ಹತ್ಯೆ ಮಾಡಿದ್ದರೂ, ಮಲ್ಲಿಕಾರ್ಜುನ ಖರ್ಗೆ ಅವರು ಅದು ಪ್ರವಾಸಿಗರ ಹತ್ಯೆ ಎಂದು ಹೇಳಿರುವುದು ಅವರ ಹಿಂದೂ ವಿರೋಧಿ ಮನಸ್ಥಿತಿಯ ಪ್ರತೀಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

Tags:
error: Content is protected !!