Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಆಕ್ಸಿಜನ್‌ ದುರಂತ ಸಂತ್ರಸ್ತರು: ಕಾಂಗ್ರೆಸ್ ನೀಡಿದ್ದ ಹಣ ವಾಪಾಸ್ ಕೊಡಲು ತೀರ್ಮಾನ

ಚಾಮರಾಜನಗರ : ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಆಕ್ಸಿಜನ್‌ ದೊರಕದೆ ಮೃ*ತಪಟ್ಟ ಕುಟುಂಬಗಳಿಗೆ ಸರಕಾರಿ ನೌಕರಿ ನೀಡುವ ಬಗ್ಗೆ ಮಲೆ ಮಹದೇಶ್ವರ ಬೆಟ್ಟದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗದ ಕಾರಣ ನೊಂದುಕೊಂಡಿರುವ 36 ಸಂತ್ರಸ್ತ ಕುಟುಂಬದವರು, ಕಾಂಗ್ರೆಸ್‌ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೀಡಿದ್ದ ತಲಾ 1 ಲಕ್ಷ ರೂ. ಗಳನ್ನು ಹಿಂದಿರುಗಿಸಲು ನಿರ್ಧರಿಸಿದ್ದಾರೆ.

“ಭಾರತ್‌ ಜೋಡೋ’ ಯಾತ್ರೆ ವೇಳೆ ಗುಂಡ್ಲುಪೇಟೆ ಯಲ್ಲಿ ಸಂತ್ರಸ್ತ ಕುಟುಂಬದವರನ್ನೆಲ್ಲ ಭೇಟಿ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ 36 ಕುಟುಂಬದ ತಲಾ ಒಬ್ಬರಿಗೆ ಸರಕಾರಿ ನೌಕರಿ ಹಾಗೂ ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದರು.

ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ಸಂತ್ರಸ್ತ ಕುಟುಂಬದವರಿಗೆ ಸರಕಾರಿ ಉದ್ಯೋಗ ನೀಡಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಚರ್ಚಿಸುವುದಾಗಿ ಈ ಹಿಂದೆ ಹೇಳಿದ್ದರು. ಗುರುವಾರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಕ್ಸಿಜನ್‌ ಸಂತ್ರಸ್ತರ ನೆರವಿಗೆ ಸರಕಾರ ಹೆಚ್ಚಿನ ಪರಿಹಾರ ನೀಡಬಹುದು. ಸರಕಾರಿ ಉದ್ಯೋಗ ನೀಡಲು ವಿಶೇಷ ಕ್ರಮ ಕೈಗೊಳ್ಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಸ್ಪಂದನೆ ದೊರೆತಿಲ್ಲ.

Tags:
error: Content is protected !!