Mysore
35
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಾಟಾಳ್‌ ನಾಗರಾಜ್‌ ಪ್ರತಿಭಟನೆ

Vatal Nagaraj protest

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದರು.

ಮೈಸೂರಿನ ಅರಮನೆ ಆವರಣದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಈಡುಗಾಯಿ ಒಡೆದು ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ವಾಟಾಳ್‌ ನಾಗರಾಜ್‌ ಅವರು, ಗ್ರೇಟರ್ ಮೈಸೂರು, ಮೇಕೆದಾಟು ಹಾಗೂ ಮಹಾದಾಯಿ ಯೋಜನೆ ಜಾರಿ ಆಗಲೇಬೇಕು, ಗಡಿ ಭಾಗದ ಕನ್ನಡಿಗರ ರಕ್ಷಣೆ ಆಗಬೇಕು ಎಂದು ಆಗ್ರಹಿಸಿದರು. ಈ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಗೆ ಮೈಸೂರಿನ ಸ್ಥಳೀಯ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.

Tags:
error: Content is protected !!