Mysore
21
clear sky

Social Media

ಗುರುವಾರ, 02 ಏಪ್ರಿಲ 2026
Light
Dark

ನೀವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ರಾಜಾತಿಥ್ಯ ಗ್ಯಾರಂಟಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರ್.‌ಅಶೋಕ್‌ ಕಿಡಿ

ಬೆಂಗಳೂರು: ಪಾಕಿಸ್ತಾನ ವಿರುದ್ಧ ಯುದ್ಧ ಮಾಡೋದು ಬೇಡ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, “ಪಾಕಿಸ್ತಾನ ರತ್ನ” ಸಿಎಂ ಸಿದ್ದರಾಮಯ್ಯನವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ.

ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರು ರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ ಎಂದು ಕಿಡಿಕಾರಿದ್ದಾರೆ.

Tags:
error: Content is protected !!