ಮೈಸೂರು: ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಉಗ್ರರು ಗುಂಡಿನ ದಾಳಿ ನಡೆಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಹಾಗೂ ಒಕ್ಕಲಿಗ ಸಂಘಟನೆಗಳಿಂದ ಮೈಸೂರಿನಲ್ಲಿಂದು ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಕಪ್ಪು ಪಟ್ಟಿ ಧರಿಸಿ, ಪಾಕಿಸ್ತಾನದ ಹುಟ್ಟಡಗಿಸಿ ಎಂದು ಪ್ಲೇ ಕಾರ್ಡ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಭಾರತವನ್ನು ಹಿಂದೂ ರಾಷ್ಟ್ರ ಮಾಡಬೇಕು. ಉಗ್ರರ ದಾಳಿಗೆ ಕೇಂದ್ರ ಸರ್ಕಾರ ಪ್ರತೀಕಾರ ತೀರಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸೇನಾ ಪಡೆ ಜಿಲ್ಲಾಧ್ಯಕ್ಷ ತೇಜಸ್ ಲೋಕೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜನ ಭಾಗಿಯಾಗಿದ್ದರು.





