ಇಸ್ಲಾಮಾಬಾದ್: ಪಾಕಿಸ್ತಾನ (Pakistan) ಪ್ರಧಾನಿ ಶೆಹಬಾಜ್ ಷರೀಷ್‌ಗೆ (Shehbaz Sharif) ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನೇ ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಭಾರತ ಹಾಗೂ ಪಾಕ್ ಮಧ್ಯೆ ಸಂಬಂಧ ಮತ್ತಷ್ಟು ಹಳಸಿದೆ.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಪಾಕ್ ಪ್ರಧಾನಿ ಶೆಹಬಾಜ್ ಷರೀಷ್‌ಗೆ ಚಳಿ ಜ್ವರ ಬಂದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಪಾಕಿಸ್ತಾನ ವಿರುದ್ಧ ಯುದ್ಧ ಆಗಲೇಬೇಕು: ಸಚಿವ ಎಂ.ಬಿ.ಪಾಟೀಲ್
ಮಾಹಿತಿಗಳ ಪ್ರಕಾರ ಪಾಕ್ ಪ್ರಧಾನಿ ಶೆಹಬಾಜ್ ಷರೀಷ್‌ಗೆ ಮೂಲವ್ಯಾಧಿ ಇದೆ. ಇದರಿಂದಾಗಿ ಅವರ ಆರೋಗ್ಯ ಹದಗೆಟ್ಟಿದ್ದು, ರಾವಲ್ಪಿಂಡಿಯ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದಾಗ್ಯೂ ಶೆಹಬಾಜ್ ಷರೀಪ್ ಹೇಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.
ಪಾಕ್ ಪ್ರಧಾನಿ ಶೆಹಬಾಜ್ ಷರೀಷ್‌ಗೆ ಚಳಿ ಜ್ವರ ಬಂದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂಬ ಮಾಹಿತಿ ತಿಳಿಯುತ್ತಿದ್ದಂತೆ ಅನೇಕರು ಅಪಹಾಸ್ಯ ಮಾಡುತ್ತಿದ್ದು, ಭಾರತದ ದಾಳಿ ಮಾಡುತ್ತದೆ ಎಂದು ಹೆದರಿ ಶೆಹಬಾಜ್ ಷರೀಷ್‌ಗೆ ಚಳಿ ಜ್ವರ ಬಂದಿದೆ ಎಂದು ಲೇವಡಿ ಮಾಡುತ್ತಿದ್ದಾರೆ.





