Mysore
20
broken clouds

Social Media

ಶುಕ್ರವಾರ, 30 ಜನವರಿ 2026
Light
Dark

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್‌ ಕೊಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

graha lakshmi Lakshmi Hebbalkar

ಬೆಳಗಾವಿ: ಮೇ ತಿಂಗಳಲ್ಲಿ ಬಾಕಿ ಉಳಿದಿರುವ ಮೂರು ತಿಂಗಳ ಗೃಹಲಕ್ಷ್ಮೀ ಹಣ ಯಜಮಾನಿಯರ ಖಾತೆಗೆ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆಗೆ ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದೆ. ಒಂದು ವಾರ ಒಂದು ತಿಂಗಳ ಹಣ, ಮತ್ತೊಂದು ವಾರ ಮತ್ತೊಂದು ತಿಂಗಳ ಹಣವನ್ನು ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:- ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಈ ಮೂಲಕ ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಬಾಕಿ ಹಣ ಬರುವುದು ಯಾವಾಗ ಎಂದು ಪ್ರಶ್ನೆ ಮಾಡುತ್ತಿದ್ದ ಮನೆ ಯಜಮಾನಿಯರಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Tags:
error: Content is protected !!