Mysore
22
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಪಾಕಿಸ್ತಾನ್ ಪರ ಘೋಷಣೆ ಕೂಗುವುದು ದೇಶದ್ರೋಹ: ಸಿಎಂ ಸಿದ್ದರಾಮಯ್ಯ

manglore pakistan siddramaiah

ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಪ್ರಕರಣದಲ್ಲಿ ಹದಿನೈದು ಜನರ ಮೇಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.

ಇದನ್ನೂ ಓದಿ:- ಸಿದ್ದರಾಮಯ್ಯ ಪೊಲೀಸ್‌ ಅಧಿಕಾರಿ ಮೇಲೆ ಕೈ ತೋರಿಸಿ ಸಿಟ್ಟು ತೋರಿಸಿದ್ದಾರೆ ಅಷ್ಟೇ: ಶಾಸಕ ಹರೀಶ್‌ ಗೌಡ

ತಪ್ಪು ಮಾಡಿರುವವರಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಪಾಕ್‌ ಪರ ಘೋಷಣೆ ಕೂಗುವುದು ಅಪರಾಧ ಎಂದು ಎಚ್ಚರಿಕೆ ನೀಡಿದರು.

Tags:
error: Content is protected !!