Mysore
21
overcast clouds

Social Media

ಗುರುವಾರ, 01 ಜನವರಿ 2026
Light
Dark

ಭಾರತ-ಪಾಕಿಸ್ತಾನ ಸಂಘರ್ಷ | ಉದ್ವಿಗ್ನ ಶಮನಕ್ಕೆ ಜಿ7 ರಾಷ್ಟ್ರಗಳ ಒತ್ತಾಯ

ಹೊಸದಿಲ್ಲಿ : ಭಾರತ-ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಾಂತಗೊಳಿಸುವಂತೆ ಜಿ7 ರಾಷ್ಟ್ರಗಳು ಒತ್ತಾಯಿಸಿವೆ.

ಪರಮಾಣು ಶಸ್ತ್ರಸಜ್ಜಿತ ನೆರೆಹೊರೆಯವರ ನಡುವಿನ ಮಿಲಿಟರಿ ಮುಖಾಮುಖಿ ನಿರಂತರವಾಗಿ ಉಲ್ಬಣಗೊಳ್ಳುತ್ತಿರುವ ಮಧ್ಯೆ ಜಿ.7 ರಾಷ್ಟ್ರಗಳ ಗುಂಪು ಈ ಕರೆ ನೀಡಿವೆ.

ಭಾರತ ಮತ್ತು ಪಾಕಿಸ್ತಾನಗಳು ಮಾತುಕತೆಯ ಮೂಲಕ ತಮ್ಮ ಮಿಲಿಟರಿ ಸಂಘರ್ಷದ ಉಲ್ಬಣವನ್ನು ತಕ್ಷಣವೇ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿರುವ ಜಿ7 ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಲೇ ಇರುತ್ತೇವೆ ಮತ್ತು ತ್ವರಿತ ಮತ್ತು ಶಾಶ್ವತ ರಾಜತಾಂತ್ರಿಕ ಪರಿಹಾರಕ್ಕಾಗಿ ನಮ್ಮ ಬೆಂಬಲವೂ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ.

ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್, ಯುಕೆ ಮತ್ತು ಯುಎಸ್‌ನ ಜಿ7 ವಿದೇಶಾಂಗ ಮಂತ್ರಿಗಳು ಮತ್ತು ಯುರೋಪಿಯನ್ ಒಕ್ಕೂಟದ ಉನ್ನತ ಪ್ರತಿನಿಧಿಗಳು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇವೆ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ:- ಡ್ರೋನ್‌ಯುದ್ಧ : ಸೋಲಿನ ಭೀತಿಯಲ್ಲಿ ಪಾಕ್ 

ಈ ವಿಚಾರವಾಗಿ ಮಿಲಿಟರಿ ಉಲ್ಬಣವು ಪ್ರಾದೇಶಿಕ ಸ್ಥಿರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತದೆ. ಎರಡೂ ಕಡೆಯ ನಾಗರಿಕರ ಸುರಕ್ಷತೆಯ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ. ನಾವು ತಕ್ಷಣವೇ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಕರೆ ನೀಡುತ್ತೇವೆ ಮತ್ತು ಶಾಂತಿಯುತ ಫಲಿತಾಂಶಕ್ಕಾಗಿ ಎರಡೂ ದೇಶಗಳು ನೇರ ಸಂವಾದದಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುತ್ತೇವೆ ಎಂದು ಹೇಳಿವೆ.

Tags:
error: Content is protected !!