Mysore
26
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಭಾರತ-ಪಾಕಿಸ್ತಾನ ಕದನ ವಿರಾಮಕ್ಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಭಾರತ-ಪಾಕಿಸ್ತಾನ ಕದನ ವಿರಾಮ ಘೋಷಣೆ ಮಾಡಿರುವ ವಿಚಾರವನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಮಹತ್ವದ ಬೆಳವಣಿಗೆಯಲ್ಲಿ ಭಾರತ ಹಾಗೂ ಪಾಕಿಸ್ತಾನ ತಕ್ಷಣದ ಕದನ ವಿರಾಮಕ್ಕೆ ಮತ್ತು ತಟಸ್ಥ ಸ್ಥಳದಲ್ಲಿ ಸಮಗ್ರ ಮಾತುಕತೆಗಳನ್ನು ಪ್ರಾರಂಭಿಸಲು ಒಪ್ಪಿಕೊಂಡಿವೆ. ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಮಧ್ಯಸ್ಥಿಕೆಯಿಂದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಮಿಶ್ರಿ ಕದನ ವಿರಾಮ ಘೋಷಿಸಿದ್ದಾರೆ. ನಾನು ಕದನ ವಿರಾಮವನ್ನು ಸ್ವಾಗತಿಸುತ್ತೇನೆ. ಭಯೋತ್ಪಾದನೆ ವಿರುದ್ಧ ನಮ್ಮ ಯುದ್ಧ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

Tags:
error: Content is protected !!