Mysore
18
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

ಹಾಸ್ಯ ನಟ ರಾಕೇಶ್ ಪೂಜಾರಿ (34) ನಿಧನ

ಉಡುಪಿ: ತನ್ನದೇ ಹಾಸ್ಯ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸುತ್ತಿದ್ದ ನಟ ರಾಕೇಶ್ ಪೂಜಾರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ಕೇವಲ 34 ವರ್ಷ ವಯಸ್ಸಾಗಿತ್ತು.

ಕಳೆದ ರಾತ್ರಿ ಉಡುಪಿಯಲ್ಲಿ ಮೆಹೆಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿಗೆ ಸುಸ್ತು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ.

ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಕಿಲಾಡಿಗಳು ಸೀಜನ್ 3 ಕಾರ್ಯಕ್ರಮದಲ್ಲಿ ವಿನ್ನರ್ ಆಗಿದ್ದ ರಾಕೇಶ್ ಪೂಜಾರಿ ಹಾಸ್ಯ ನಟನೆಯ ಮೂಲಕ ಎಲ್ಲರ ಮನ ಗೆದ್ದಿದ್ದರು. ಇದರ ಜೊತೆಗೆ ಕನ್ನಡದ ಹಲವು ಚಿತ್ರಗಳಲ್ಲೂ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು.

ಇನ್ನು ರಾಕೇಶ್ ಪೂಜಾರಿ ನಿಧನಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಸಂತಾಪ ಸೂಚಿಸಿದ್ದು, ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದ್ದಾರೆ‌.

Tags:
error: Content is protected !!