Mysore
21
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಹೆಚ್.ಡಿ ಕೋಟೆಗೆ 140 ಕೋಟಿ ಸವಲತ್ತು ವಿತರಿಸಿದ ಸಿಎಂ

ಹೆಚ್‌.ಡಿ ಕೋಟೆ : ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಆದರೆ, ಇಂದು ಒಂದೇ ದಿನ 140 ಕೋಟಿ ಅಭಿವೃದ್ಧಿ ಕಾರ್ಯಗಳನ್ನು ಹೆಚ್.ಡಿ.ಕೋಟೆ ಜನಕ್ಕೆ ಅರ್ಪಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ. ಅವರು ಸುಳ್ಳು ಹೇಳ್ತಾರೆ, ನೀವು ನಂಬ್ತೀರಿ. ಈ ಬಾರಿ 8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ. 55 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ತೆಗೆದಿರಿಸಿದ್ದೀವಿ. 80 ಸಾವಿರ ಕೋಟಿ ಬಂಡವಾಳ ವೆಚ್ಚಕ್ಕೆ ಮೀಸಲಿರಿಸಿಟ್ಟೇವೆ. ಈ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸಿದರು.

ಇದನ್ನೂ ಓದಿ:- ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

ಬಿಜೆಪಿಯವರು ತಲೆ ಮೇಲೆ ಹೊಡೆದಂತೆ ಸುಳ್ಳು ಹೇಳ್ತಾರೆ. ಹಾಲಿನ ದರ 4ರೂ ಹೆಚ್ಚು ಮಾಡಿ ಇದರಲ್ಲಿ ಒಂದೂ ರೂಪಾಯಿಯನ್ನೂ ನಾವು ಇಟ್ಟುಕೊಳ್ಳದೆ ಅಷ್ಟನ್ನೂ ರೈತರಿಗೆ, ಗೋಸಾಕಾಣಿಕೆದಾರರಿಗೆ ವರ್ಗಾಯಿಸಿದ್ದೇವೆ.

ಆದರೆ ಬಿಜೆಪಿ ಚಿನ್ನ, ಬೆಳ್ಳಿ, ಡೀಸೆಲ್, ಪೆಟ್ರೋಲ್ , ಅಡುಗೆ ಅನಿಲ, ಬೇಳೆ, ಗೊಬ್ಬರ, ಎಣ್ಣೆ ಕಾಳು ಸೇರಿ ಎಲ್ಲದರ ಬೆಲೆ ಹೆಚ್ಚಿಸಿದ್ದು ಕೇಂದ್ರದ ಬಿಜೆಪಿ ಸರ್ಕಾರ, ಮೋದಿ ಸರ್ಕಾರ. ಆದ್ದರಿಂದ ಜನಾಕ್ರೋಶ ಇರುವುದು ಬಿಜೆಪಿ ಸರ್ಕಾರದ ಮೋದಿಯ ವಿರುದ್ಧವೇ ಹೊರತು ನಮ್ಮ ಕಾಂಗ್ರೆಸ್ ಸರ್ಕಾರದ ಮೇಲಲ್ಲ ಎಂದು ಬಿಜೆಪಿಯ ಜನಕ್ರೋಶ ಯಾತ್ರೆಯನ್ನು ವ್ಯಂಗ್ಯವಾಡಿದರು.

Tags:
error: Content is protected !!