Mysore
19
few clouds

Social Media

ಬುಧವಾರ, 07 ಜನವರಿ 2026
Light
Dark

ನಂಜನಗೂಡು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆ ದಾಳಿ

ಮೈಸೂರು: ಜಮೀನಿನಲ್ಲಿ ಮೇಯುತ್ತಿದ್ದ ನಾಲ್ಕು ಹಸುಗಳ ಮೇಲೆ ಚಿರತೆಯೊಂದು ದಾಳಿ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರೈತ ಬಸವಣ್ಣ ಎಂಬುವವರು ಹಸುಗಳನ್ನು ಜಮೀನಿನಲ್ಲಿ ಮೇಯಿಸುತ್ತಿದ್ದಾಗ ಚಿರತೆ ಅಠಾತ್‌ ದಾಳಿ ಮಾಡಿದೆ. ಈ ವೇಳೆ ಹಸುಗಳು ದಿಕ್ಕಾಪಾಲಾಗಿ ಓಡಿವೆ. ಈ ವೇಳೆ ಹಸುಗಳು ಹಳ್ಳಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿವೆ.

ಚಿರತೆ ದಾಳಿ ನಡೆಸುತ್ತಿದ್ದಂತೆ ತೀವ್ರ ಭಯಭೀತರಾಗಿರುವ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಚಿರತೆಗಳ ಹಾವಳಿ ಜಾಸ್ತಿಯಾಗಿದ್ದು, ಅವುಗಳನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಇನ್ನು ಚಿರತೆ ದಾಳಿಯಿಂದ ಗಂಭೀರ ಗಾಯಗೊಂಡಿರುವ ಹಸುಗಳು ಬದುಕುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದ್ದು, ಸರ್ಕಾರ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Tags:
error: Content is protected !!