ಲಕ್ನೋ: ನಮಗೆ ಯಾರಾದರೂ ತೊಂದರೆ ಕೊಟ್ಟರೇ ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ ಕೊಟ್ಟಿದ್ದಾರೆ.
ಭಾರತೀಯ ಸೇನೆಯ ಶೌರ್ಯವನ್ನು ಶ್ಲಾಘಿಸಲು ಯೋಗಿ ಆದಿತ್ಯನಾಥ್ ಭಾರತ್ ಶೌರ್ಯ ಯಾತ್ರೆ ಆರಂಭಿಸಿದ್ದಾರೆ.
ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ಕಿಡಿಕಾರಿದ್ದು, ಕಠಿಣ ಸಂದೇಶ ರವಾನಿಸಿದ್ದಾರೆ.
ನಾವು ಯಾರಿಗೂ ತೊಂದರೆ ನೀಡಲ್ಲ. ಒಂದು ವೇಳೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡಲ್ಲ ಎಂದು ಸಂದೇಶ ರವಾನಿಸಿದರು.
ಇದನ್ನೂ ಓದಿ:- ಆದಷ್ಟು ಬೇಗ ಮೈಸೂರು ಪಾಲಿಕೆ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಸಂಸದ ಯದುವೀರ್ ಒಡೆಯರ್ ಆಗ್ರಹ
ಇನ್ನು ಮುಂದುವರಿದು ಮಾತನಾಡಿದ ಅವರು ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.





